Home ಟಾಪ್ ಸುದ್ದಿಗಳು ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಕಾಂಗ್ರೆಸ್ ಮುಸ್ಲಿಂ ಶಾಸಕರು: ಸಮವಸ್ತ್ರ ವಿವಾದ ಬಗೆಹರಿಸಲು ಮನವಿ

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಕಾಂಗ್ರೆಸ್ ಮುಸ್ಲಿಂ ಶಾಸಕರು: ಸಮವಸ್ತ್ರ ವಿವಾದ ಬಗೆಹರಿಸಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಸ್ಲಿಮ್ ಶಾಸಕರು ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಸಿಎಂ ಅವರ ರೇಸ್ ಕೋರ್ಸ್ ನಿವಾಸದಲ್ಲಿ ಮುಸ್ಲಿಂ ಜನಪ್ರತಿನಿಧಿಗಳು ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಹಿಜಾಬ್ ವಿಚಾರವನ್ನು ಆದಷ್ಟು ಶೀಘ್ರ ಶಾಂತಿಯುತವಾಗಿ ಬಗೆಹರಿಸಬೇಕೆಂದು ಒತ್ತಾಯಿಸಿದರು.

ಅಲ್ಲದೆ, ಮುಂದಿನ ತಿಂಗಳು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ಮೀಸಲಿರಿಸಬೇಕು ಒತ್ತಾಯಿಸಿದರು. ಅದೇ ರೀತಿ ರಾಜ್ಯದಲ್ಲಿ ತಲೆದೋರಿರುವ ಹಿಜಾಬ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಮನವಿ ಮಾಡಿರುವುದಾಗಿ ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.

ನಿಯೋಗದಲ್ಲಿ ಶಾಸಕರಾದ ಯುಟಿ ಖಾದರ್, ಎನ್.ಎ.ಹ್ಯಾರಿಸ್, ತನ್ವೀರ್ ಸೇಠ್, ಝಮೀರ್ ಅಹ್ಮದ್ ಖಾನ್, ಸಲೀಂ ಅಹಮದ್, ರಿಝ್ವಾನ್ ಅರ್ಷದ್, ಖನೀಜ್ ಫಾತಿಮಾ ಸೇರಿ ಹಲವರು ಇದ್ದರು.

Join Whatsapp
Exit mobile version