ಮಂಡ್ಯ: ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಬಜರಂಗದಳ, ವಿಹಿಂಪ ವಿರುದ್ಧ ಕ್ರಮಕ್ಕೆ ಮುಸ್ಲಿಮ್ ಒಕ್ಕೂಟ ಆಗ್ರಹ

Prasthutha|

ಮಂಡ್ಯ: ಶಾಂತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಪ್ರಚೋದನಾಕಾರಿ ಕರಪತ್ರಗಳನ್ನು ಹಂಚಿ ಅಶಾಂತಿ ಹಬ್ಬಿಸಲು ಪ್ರಯತ್ನಿಸುತ್ತಿರುವ ಬಜರಂಗದಳ, ವಿಶ್ವ ಹಿಂದೂ ಪರಿಷತ್ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಜರುಗಿಸುವಂತೆ ಮಂಡ್ಯ ಮುಸ್ಲಿಮ್ ಒಕ್ಕೂಟ ಆಗ್ರಹಿಸಿದೆ.

- Advertisement -

ಇಂದು ಮಂಡ್ಯ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಫಾರೂಕ್, ಮಂಡ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರು ಬಾವೈಕ್ಯತೆಯಿಂದ ಜೀವಿಸುತ್ತಿದ್ದಾರೆ. ಈ ಮಧ್ಯೆ ಪ್ರವಾಸಿ ತಾಣವಾಗಿರುವ ಶ್ರೀರಂಗಪಟ್ಟಣದಲ್ಲಿ ಜೂನ್ 4 ರಂದು ಬಜರಂಗದಳ ಆಯೋಜಿಸಿದ ಹನುಮಾನ್ ಮಂದಿರ ಚಲೋ ಕಾರ್ಯಕ್ರಮದ ಕರಪತ್ರಗಳನ್ನು ಹಂಚುವ ಮೂಲಕ ಜಿಲ್ಲೆಯ ಶಾಂತಿಗೆ ಕೊಳ್ಳಿ ಇಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಎರಡು ಸಮುದಾಯಗಳ ಮಧ್ಯೆ ವೈಷಮ್ಯ ಮೂಡಿಸಲು ಬಜರಂಗದಳ, ವಿಹಿಂಪ ಸೇರಿದಂತೆ ಸಂಘಪರಿವಾರವು ಜೂನ್ 4 ರಂದು ಬೆಳಿಗ್ಗೆ 10.30ಕ್ಕೆ ಶ್ರೀರಂಗಪಟ್ಟಣ ಬಸ್ ನಿಲ್ದಾಣದ ಬಳಿಯ ಕುವೆಂಪು ವೃತ್ತದಿಂದ ಜಾಮೀಯ ಮಸೀದಿ ವರೆಗೆ ಹನುಮಾನ್ ಮಂದಿರ ಚಲೋ ಕಾರ್ಯಕ್ರಮ ಆಯೋಜಿಸಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ಸಮಾಜದಲ್ಲಿ ಭಯವನ್ನುಂಟು ಮಾಡುವ ಕರಪತ್ರಗಳನ್ನು ಹಂಚಿದ ಮತ್ತು ಕಾರ್ಯಕ್ರಮ ಆಯೋಜಿಸುವ ಸಂಘಪರಿವಾರದ ಮುಖಂಡರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಬೇಕು ಮತ್ತು ಶ್ರೀರಂಗಪಟ್ಟಣದಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ಅವರು ಆಗ್ರಹಿಸಿದ್ದಾರೆ.



Join Whatsapp