ಪುತ್ತೂರು: ಮುಸ್ಲಿಮ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

Prasthutha|

ಪುತ್ತೂರು: ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಿರಿ ಮುಂದುವರಿದಿದ್ದು, ಪುತ್ತೂರಿನಲ್ಲಿ ಅಮಾಯಕ ಮುಸ್ಲಿಮ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

- Advertisement -


ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.


ಸಂಘಪರಿವಾರದ ಕಾರ್ಯಕರ್ತರು ಯುವಕನನ್ನು ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ನಂತರ ಯುವಕನನ್ನು ಪುತ್ತೂರು ಪೊಲೀಸರಿಗೆ ಒಪ್ಪಿಸಿ ಯುವಕನು ತನ್ನ ಸಹಪಾಠಿ ಗೆಳತಿಯಾದ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿದ್ದ ಎಂದು ಆರೋಪಿಸಲಾಗಿದೆ.