ಕೊಂಬೆಟ್ಟು ಕಾಲೇಜಿನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ: ಐವರು ಪೊಲೀಸ್ ವಶಕ್ಕೆ !

Prasthutha|

ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜಿನ  ಮುಸ್ಲಿಮ್ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಎರಡು ದಿನಗಳ ಹಿಂದೆ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ತ್ರಿಶೂಲದಿಂದ ಇರಿಯಲಾಗಿತ್ತು. ಆರೋಪಿಗಳನ್ನು ಬಂಧಿಸುವಂತೆ ಸಿಎಫ್ ಐ ಹಾಗೂ ಇತರ ಸಂಘಟನೆಗಳು ಒತ್ತಾಯಿಸಿದ್ದರು. ಇದೀಗ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ವಿಚಾರ ತಿಳಿಯುತ್ತಿದ್ದಂತೆ  ಸಂಘಪರಿವಾರ ಕಾರ್ಯಕರ್ತರು ಠಾಣೆಯೆದುರು ಜಮಾವಣೆಯಾಗಿದ್ದರು.

Join Whatsapp