ಬಾಬ್ರಿ ಮಸೀದಿ ಧ್ವಂಸ ಪ್ರಹಸನ : ವಿವೇಕಾನಂದ ಕಾಲೇಜು ವಿರುದ್ಧ ಕ್ರಮಕ್ಕೆ ಮುಸ್ಲಿಂ ಯುವಜನ ಪರಿಷತ್ ಆಗ್ರಹ

Prasthutha|

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಹಸನ ನಡೆಸಲು ಅವಕಾಶ ಮಾಡಿಕೊಟ್ಟಿರುವ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪುತ್ತೂರಿನ ಮುಸ್ಲಿಂ ಯುವಜನ ಪರಿಷತ್ ಆಗ್ರಹಿಸಿದೆ.

- Advertisement -

ಪುತ್ತೂರು ಪೋಲಿಸ್ ಉಪ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಹಾಜಿ ಅಶ್ರಫ್ ಕಲ್ಲೇಗ ನೇತೃತ್ವದ ನಿಯೋಗವು, ಭಯೋತ್ಪಾದನೆ ಸ್ವರೂಪದ ಅಪರಾಧ ಪ್ರಕರಣವನ್ನು ವಿದ್ಯಾರ್ಥಿಗಳ ಮೂಲಕ  ವೈಭವೀಕರಿಸಿರುವ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದೆ.

ವಿವೇಕಾನಂದ ಕಾಲೇಜಿನಲ್ಲಿ ನಡೆದ ಘಟನೆ ಇಲಾಖೆಯ ಗಮನಕ್ಕೆ ಬಂದಿದೆ ಎಂದು ತಿಳಿಸಿರುವ ಉಪ ವರಿಷ್ಠಾಧಿಕಾರಿಯವರು,ಈ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.

- Advertisement -

ಮುಸ್ಲಿಂ ಯುವಜನ ಪರಿಷತ್ ಪದಾಧಿಕಾರಿಗಳಾದ ಹಾಜಿ ಇಬ್ರಾಹಿಂ ಸಾಗರ್, ಹಮೀದ್ ಸಾಲ್ಮರ, ಅಶ್ರಫ್ ಮುರ ಹಾಗೂ ಖಾಸಿಂ ಹಾಜಿ ರವರು ಉಪಸ್ಥಿತರಿದ್ದರು.



Join Whatsapp