ವಿಜಯಪುರ: ನನ್ನ ಅಧಿಕಾರಾವಧಿಯಲ್ಲಿ ಮುಸ್ಲಿಮರಿಗೆ ಸೌಲಭ್ಯ ಕೊಡದೇ ಕೇವಲ ಹಿಂದೂಗಳಿಗೆ ಮಾತ್ರ ಕೊಟ್ಟಿರುವುದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿಂದಗಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಬರುವ ಚುನಾವಣೆಯಲ್ಲಿ 135 ಸೀಟ್ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ತರಲು ನಾನು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ತಮ್ಮ ರಾಜಕೀಯ ಎದುರಾಳಿಗಳಿಗೆ ಸವಾಲು ಹಾಕಿದರು.