►23 ಮುಸ್ಲಿಮ್ ಸಂಘಟನೆಗಳಿಂದ ಮುಖ್ಯಮಂತ್ರಿಗೆ ದೂರು
ಚೆನ್ನೈ: ದೀರ್ಘಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ಪಟ್ಟಿಯಿಂದ ಮುಸ್ಲಿಮರನ್ನು ಹೊರಗಿಡಲಾಗಿದ್ದು, ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ 23 ಮುಸ್ಲಿಂ ಸಂಘಟನೆಗಳು ದೂರು ಸಲ್ಲಿಸಿವೆ.
ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಅವರ ಜನ್ಮದಿನದ ಅಂಗವಾಗಿ ಶಿಕ್ಷೆಯ ಅವಧಿ ಮುಗಿಯುವ ಮೊದಲು 700 ಕ್ಕೂ ಹೆಚ್ಚು ಕೈದಿಗಳನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರದ ಕುರಿತು ಮುಸ್ಲಿಂ ಸಂಘಟನೆಗಳು ತಮಿಳುನಾಡು ಸರ್ಕಾರವನ್ನು ಸಂಪರ್ಕಿಸಿವೆ.
22-26 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿರುವ 38 ಮುಸ್ಲಿಮರ ಪ್ರಕರಣಗಳನ್ನು ಮರುಪರಿಶೀಲಿಸಬೇಕೆಂದು ಸಂಘಟನೆಗಳು ಆಗ್ರಹಿಸಿವೆ.
ಕನಿಷ್ಠ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವವರನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಬಿಡುಗಡೆಯಾಗುವ ಕೈದಿಗಳ ಪಟ್ಟಿಯಲ್ಲಿ ಮುಸ್ಲಿಮರ ಹೆಸರು ಇಲ್ಲದಿರುವುದು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.