ಮುಸ್ಲಿಮರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಬಾರದು: ಸಿಎಂ ಮನೋಹರ್ ಲಾಲ್ ಕಟ್ಟರ್

Prasthutha|

ಹರ್ಯಾಣ: ಗುರ್‌ ಗಾಂವ್‌ ನಲ್ಲಿ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಮಾಡಬಾರದು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ.

- Advertisement -

 ಈ ಬಗ್ಗೆ  ಮಾತನಾಡಿದ ಅವರು, ನಮಾಜ್ ಸಲ್ಲಿಸಲು ಸಾರ್ವಜನಿಕ ಸ್ಥಳಗಳಲ್ಲಿ ಜಾಗ ಮೀಸಲಿಡುವ ಉದ್ದೇಶದ ಆದೇಶವನ್ನು ಹಿಂಪಡೆಯಲಾಗಿದೆ. ನಾನು ಪೊಲೀಸರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಸಮಸ್ಯೆಯನ್ನು ಪರಿಹರಿಸಬೇಕು. ಪೂಜಾ ಸ್ಥಳಗಳಲ್ಲಿ ಯಾರೊಬ್ಬರೂ ಪ್ರಾರ್ಥನೆ ಮಾಡುವುದರಿಂದ ನಮಗೆ ಯಾವುದೇ ತೊಂದರೆಗಳಿಲ್ಲ, ಈ ಉದ್ದೇಶಕ್ಕಾಗಿ ಆ ಸ್ಥಳಗಳನ್ನು ನಿರ್ಮಿಸಲಾಗಿದೆ. ಆದರೆ ಪ್ರಾರ್ಥನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಮಾಡಬಾರದು. ಅದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

- Advertisement -

ಗುರುಗ್ರಾಮದಲ್ಲಿ ಸರಕಾರಿ ಸ್ವಾಮ್ಯದ ಭೂಮಿಯಲ್ಲಿ ನಮಾಜ್ ಸಲ್ಲಿಸುವಾಗ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೇ ಕಾರ್ಯಕರ್ತರು ಘೋಷಣೆಗಳ ಮೂಲಕ ನಮಾಜ್ ಸಲ್ಲಿಸುವುದರ ವಿರುದ್ಧ ಪ್ರತಿಭಟಿಸಿದ್ದರು.

Join Whatsapp