Home ಟಾಪ್ ಸುದ್ದಿಗಳು ಮುಸ್ಲಿಮರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಬಾರದು: ಸಿಎಂ ಮನೋಹರ್ ಲಾಲ್ ಕಟ್ಟರ್

ಮುಸ್ಲಿಮರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಬಾರದು: ಸಿಎಂ ಮನೋಹರ್ ಲಾಲ್ ಕಟ್ಟರ್

ಹರ್ಯಾಣ: ಗುರ್‌ ಗಾಂವ್‌ ನಲ್ಲಿ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಮಾಡಬಾರದು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ.

 ಈ ಬಗ್ಗೆ  ಮಾತನಾಡಿದ ಅವರು, ನಮಾಜ್ ಸಲ್ಲಿಸಲು ಸಾರ್ವಜನಿಕ ಸ್ಥಳಗಳಲ್ಲಿ ಜಾಗ ಮೀಸಲಿಡುವ ಉದ್ದೇಶದ ಆದೇಶವನ್ನು ಹಿಂಪಡೆಯಲಾಗಿದೆ. ನಾನು ಪೊಲೀಸರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಸಮಸ್ಯೆಯನ್ನು ಪರಿಹರಿಸಬೇಕು. ಪೂಜಾ ಸ್ಥಳಗಳಲ್ಲಿ ಯಾರೊಬ್ಬರೂ ಪ್ರಾರ್ಥನೆ ಮಾಡುವುದರಿಂದ ನಮಗೆ ಯಾವುದೇ ತೊಂದರೆಗಳಿಲ್ಲ, ಈ ಉದ್ದೇಶಕ್ಕಾಗಿ ಆ ಸ್ಥಳಗಳನ್ನು ನಿರ್ಮಿಸಲಾಗಿದೆ. ಆದರೆ ಪ್ರಾರ್ಥನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಮಾಡಬಾರದು. ಅದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಗುರುಗ್ರಾಮದಲ್ಲಿ ಸರಕಾರಿ ಸ್ವಾಮ್ಯದ ಭೂಮಿಯಲ್ಲಿ ನಮಾಜ್ ಸಲ್ಲಿಸುವಾಗ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೇ ಕಾರ್ಯಕರ್ತರು ಘೋಷಣೆಗಳ ಮೂಲಕ ನಮಾಜ್ ಸಲ್ಲಿಸುವುದರ ವಿರುದ್ಧ ಪ್ರತಿಭಟಿಸಿದ್ದರು.

Join Whatsapp
Exit mobile version