Home ಟಾಪ್ ಸುದ್ದಿಗಳು ಇಂದು ಮುಸ್ಲಿಮರು, ನಾಳೆ ಇತರ ಸಮುದಾಯಗಳು ಗುರಿ: ರಾಹುಲ್ ಗಾಂಧಿ

ಇಂದು ಮುಸ್ಲಿಮರು, ನಾಳೆ ಇತರ ಸಮುದಾಯಗಳು ಗುರಿ: ರಾಹುಲ್ ಗಾಂಧಿ

0

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರ ವಿರುದ್ಧ ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಲೋಕಸಭಾ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್‌ ಮಾಡಿರುವ ಅವರು, ‘ಮುಸ್ಲಿಮರ ವೈಯಕ್ತಿಕ ಕಾನೂನುಗಳು ಮತ್ತು ಅವರ ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಅಸ್ತ್ರವಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದೆ. ಮುಸ್ಲಿಮರನ್ನು ಮೂಲೆಗುಂಪು ಮಾಡುವ ಉದ್ದೇಶವನ್ನು ಇದು ಹೊಂದಿದೆ’ ಎಂದು ಹೇಳಿದ್ದಾರೆ.

‘ಆರ್‌ ಎಸ್‌ ಎಸ್, ಬಿಜೆಪಿ ಸಂವಿಧಾನದ ಮೇಲೆ ನಡೆಸುತ್ತಿರುವ ಈ ದಾಳಿ ಇಂದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲು ಸಾಧ್ಯತೆಯಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಈ ಮಸೂದೆಯು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ’ ಎಂದು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version