ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ: ರೇವಣ್ಣ

Prasthutha|

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

- Advertisement -


ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ರೇವಣ್ಣ, ಹಾಸನ ಆರ್ಟ್ಸ್ ಕಾಲೇಜಿನಲ್ಲಿ ಮುಸ್ಲಿಮರು ಎಂಬ ಕಾರಣಕ್ಕಾಗಿ ಪ್ರಾಂಶುಪಾಲ ಹುದ್ದೆ ಕೊಟ್ಟಿಲ್ಲ. ಮುಸ್ಲಿಂ ವ್ಯಕ್ತಿಗೆ ಸೀನಿಯಾರಿಟಿ ಇದ್ದರೂ ಅವರಿಗೆ ಹುದ್ದೆ ಕೊಟ್ಟಿಲ್ಲ. ಬದಲಾಗಿ ಜೂನಿಯರ್ ವ್ಯಕ್ತಿಗೆ ಹುದ್ದೆ ನೀಡಲಾಗಿದೆ. ಇನ್ನೂ ಮುಸ್ಲಿಮರಿಗೆ ರಕ್ಷಣೆ ಇಲ್ಲ. ಈ ಸರ್ಕಾರದ ಬಂದ ಮೇಲೂ ರಕ್ಷಣೆ ಇಲ್ಲ ಎಂದು ಹೇಳಿದರು.


ಈಗಲಾದರೂ ಮುಸ್ಲಿಮರಿಗೆ ರಕ್ಷಣೆ ಕೊಡಿ. ಮುಸ್ಲಿಮರಿಗೆ ಇಷ್ಟೆಲ್ಲ ನಿಮಗೆ ಓಟ್ ಹಾಕಿದ್ದಾರೆ. ಅದನ್ನು ಸರಿಪಡಿಸಿ ಎಂದು ರೇವಣ್ಣ ಆಗ್ರಹಿಸಿದರು.