Home ಟಾಪ್ ಸುದ್ದಿಗಳು ರಾಹುಲ್ ಗಾಂಧಿಯ 4ನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗಲ್ಲ: ಅಮಿತ್ ಶಾ

ರಾಹುಲ್ ಗಾಂಧಿಯ 4ನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗಲ್ಲ: ಅಮಿತ್ ಶಾ

ಧುಲೆ: ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಕೊಡಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿನಲ್ಲಿಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.


ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಮುಸ್ಲಿಂ ಮುಖಂಡರ ಗುಂಪು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಮುಸ್ಲಿಮರಿಗೆ ಮೀಸಲಾತಿ ಒದಗಿಸುವಂತೆ ಮನವಿ ಮಾಡಿದ್ದಾರೆ. ಒಂದೊಮ್ಮೆ, ಮುಸ್ಲಿಮರಿಗೆ ಮೀಸಲಾತಿ ನೀಡಿದರೆ, ಎಸ್ ಸಿ, ಎಸ್ ಟಿ ಮತ್ತು ಒಬಿಸಿ ಮೀಸಲಾತಿಯಲ್ಲಿ ಕಡಿತ ಮಾಡಬೇಕಾಗುತ್ತದೆ. ರಾಹುಲ್ ಬಾಬಾ, ನೀವಷ್ಟೇ ಅಲ್ಲ. ನಿಮ್ಮ ವಂಶದ ನಾಲ್ಕನೇ ತಲೆಮಾರು ಬಂದರೂ ಎಸ್ ಸಿ, ಎಸ್ ಟಿ, ಒಬಿಸಿ ಮೀಸಲಾತಿ ಕಡಿತ ಮಾಡಿ, ಮುಸ್ಲಿಮರಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.


‘370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಸ್ಥಾನಮಾನವನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಇಂದಿರಾ ಗಾಂಧಿ ಸ್ವರ್ಗದಿಂದ ಇಳಿದುಬಂದರೂ ಅದು ಸಾಧ್ಯವಿಲ್ಲ’ಎಂದು ಶಾ ಹೇಳಿದ್ದಾರೆ.

Join Whatsapp
Exit mobile version