Home ಕರಾವಳಿ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ಯತ್ನ: ಹೆಜಮಾಡಿಯಲ್ಲಿ ಮುತಾಲಿಕ್ ಪೊಲೀಸ್ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ಯತ್ನ: ಹೆಜಮಾಡಿಯಲ್ಲಿ ಮುತಾಲಿಕ್ ಪೊಲೀಸ್ ವಶಕ್ಕೆ

ಮಂಗಳೂರು: ಜಿಲ್ಲಾ ಪ್ರವೇಶಕ್ಕೆ ನಿಷೇಧವಿದ್ದರೂ ಅದನ್ನು ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇತ್ತೀಚೆಗೆ ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬಸ್ಥರನ್ನು ಭೇಟಿ ಮಾಡಲು ಮುತಾಲಿಕ್, ಸುಳ್ಯಕ್ಕೆ ಬರುವ ಬಗ್ಗೆ ಮಾಹಿತಿ ಲಭಿಸಿತ್ತು. ಅವರು ಭೇಟಿ ನೀಡಿದರೆ ಇಲ್ಲಿನ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮತ್ತು ಕಮಿಷನರೇಟ್ , ಮುತಾಲಿಕ್ ರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು.


ಆದರೂ ಇಂದು ಬೆಳಗ್ಗೆ ಮುತಾಲಿಕ್ ಉಡುಪಿ ಜಿಲ್ಲೆಗೆ ಆಗಮಿಸಿ ಅಲ್ಲಿಂದ ಮಂಗಳೂರಿಗೆ ಬರಲು ಪ್ರಯತ್ನಿಸಿದ್ದರು. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ್ದರು. ಅದರಂತೆ ಅವರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಹೆಜಮಾಡಿ ಮೂಲಕ ಆಗಮಿಸಿದಾಗ ಅವರನ್ನು ವಶಕ್ಕೆ ಪಡೆದು ಕಾನೂನು ಪ್ರಕಾರ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದರು.

Join Whatsapp
Exit mobile version