Home ಕರಾವಳಿ ಅಕ್ರಮ ಆಸ್ತಿ ಗಳಿಕೆ: ಸಚಿವ ಸುನಿಲ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಮುತಾಲಿಕ್

ಅಕ್ರಮ ಆಸ್ತಿ ಗಳಿಕೆ: ಸಚಿವ ಸುನಿಲ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಮುತಾಲಿಕ್

ಉಡುಪಿ: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಜಿಲ್ಲಾಧಿಕಾರಿ ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.


ಎರಡು ತಿಂಗಳಿನಿಂದ ಮುತಾಲಿಕ್ ನಿರಂತರವಾಗಿ ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸುನಿಲ್ ಕುಮಾರ್ ಅವರದ್ದು ನಕಲಿ ಹಿಂದುತ್ವ. ಅವರು ಹಿಂದುತ್ವದ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಮಾತ್ರವಲ್ಲ ಸಾಕಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.


ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರ ಕೆರೆಕಟ್ಟೆ ಗ್ರಾಮದಲ್ಲಿ 67 ಎಕರೆ ಕೃಷಿ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಬೇರೆ ಬೇರೆ ರೈತರಿಂದ ಖರೀದಿ ಮಾಡಿದ್ದಾರೆ. ಮುಂದೆ ಅದು ಕೈಗಾರಿಕಾ ಪ್ರದೇಶವಾಗಿ ಭೂ ಪರಿವರ್ತನೆ ಮಾಡಿ 4-5 ಪಟ್ಟು ಹೆಚ್ಚಿನ ಬೆಲೆಗೆ ಸರ್ಕಾರ ಖರೀದಿ ಮಾಡುತ್ತದೆ. 4 ಚಿಲ್ಲರೆ ಕೋಟಿಗೆ ಖರೀದಿಸುವ ಮೂಲಕ ಜಮೀನು ಹೊಂದಿರುವ ಬಡ ರೈತರಿಗೂ ಅನ್ಯಾಯ ಆಗಿದೆ. ಇದರಲ್ಲಿ ಶಾಸಕ, ರಾಜ್ಯದ ಪ್ರಭಾವಿ ಮಂತ್ರಿಗಳ ಕೈವಾಡ ಇದೆ ಎಂದು ಮುತಾಲಿಕ್ ಆರೋಪ ಮಾಡಿದ್ದಾರೆ.

Join Whatsapp
Exit mobile version