March 9, 2021

ಮುಝಫ್ಫರ್ ನಗರ ಗಲಭೆ | ಪ್ರಮುಖ ಆರೋಪಿ ಬಿಜೆಪಿ ಶಾಸಕ ಖುಲಾಸೆ

ಮುಝಫ್ಫರ್ ನಗರದಲ್ಲಿ ನಡೆದ ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಸಂಗೀತ ಸೋಮ್ ವಿರುದ್ಧದ ಎಲ್ಲಾ ಕೇಸ್ ಗಳನ್ನು ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಹೇಳಿ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಖುಲಾಸೆ ಮಾಡಿದೆ.

2013 ರಲ್ಲಿ ಮುಝಫ್ಫರ್ ನಗರದಲ್ಲಿ ನಡೆದ ಕೋಮು ಗಲಭೆಗೆ ಮುಂಚಿತವಾಗಿ ಸಾಮಾಜಿಕ ಮಾಧ್ಯಮದಲ್ಲಿ ಘರ್ಷಣೆಯನ್ನು ಪ್ರಚೋದಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಸಂಗೀತ ಸೋಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಖುಲಾಸೆಗೊಳಿಸುವಂತೆ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ತಂಡ ಮುಜಫರ್‌ನಗರದ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಅಂಗೀಕರಿಸಿದೆ.

ಪ್ರಕರಣ ದಾಖಲಿಸಿದ್ದ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಾವನ್ನಪ್ಪಿದ್ದಾರೆ ಮತ್ತು ಕೇಸು ಖುಲಾಸೆಗೊಳಿಸುವುದರ ವಿರುದ್ಧ ಯಾವುದೇ ಆಕ್ಷೇಪ ವ್ಯಕ್ತವಾಗದ ಕಾರಣ ಸಂಗೀತ ಸೋಮ್ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!