ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|

ಮೈಸೂರು: ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ವಿರುದ್ಧವೇ ನಡೆದಿದೆ. ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಅಧಿಕಾರಕ್ಕಾಗಿ ಬಿಜೆಪಿಗೆ ಹೋಗಲು ಸಿದ್ದರಾಮಯ್ಯ ಮುಂದಾಗಿದ್ರು ಎಂಬ ಜಿಟಿಡಿ ಮತ್ತು ಕುಮಾರಸ್ವಾಮಿ ಹೇಳಿಕೆಗಳಿಗೆ ತಿರುಗೇಟು ಕೊಟ್ಟ ಸಿಎಂ, ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ..? ಯಾರನ್ನೋ ಯಾವುದೋ ಸಂದರ್ಭದಲ್ಲಿ ಭೇಟಿ ಮಾಡಿರುತ್ತೇವೆ. ಅದಕ್ಕೆಲ್ಲ ಪಕ್ಷ ಸೇರುತ್ತಾರೆ ಎಂದು ಹೇಳಲು ಸಾಧ್ಯನಾ ಎಂದು ಪ್ರಶ್ನೆ ಮಾಡಿದ ಅವರು, ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ವಿರುದ್ಧವೇ ನಡೆದಿದೆ ಎಂದರು.


ಇತ್ತೀಚೆಗೆ ಅಮಿತ್ ಶಾ ಭೇಟಿ ಮಾಡಿದೆ. ಹಿಂದೆ ಯಾವುದೋ ಸಂದರ್ಭದಲ್ಲಿ ಅಡ್ವಾಣಿ ಅವರನ್ನ ಭೇಟಿ ಮಾಡಿದ್ದೆ. ಅದಕ್ಕೆಲ್ಲಾ ಈ ಅರ್ಥ ಕಟ್ಟುವುದಕ್ಕೆ ಆಗುತ್ತಾ ಎಂದು ಸಿಎಂ ಪ್ರಶ್ನಿಸಿದರು.

Join Whatsapp