ಅಪ್ಪ ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

Prasthutha|

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.


ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಹೇಳಿದ್ದಾರೆ.



Join Whatsapp