‘ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು’: ಕುಮಾರಸ್ವಾಮಿ

Prasthutha|

ಮಡಿಕೇರಿ: ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ಸಾತ್ಯಕಿ ಯಾರು ಅವರಿಗೆ ಏನು ಗೊತ್ತಿದೆ ? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

- Advertisement -


ಈ ಬಗ್ಗೆ ಮಡಿಕೇರಿಯಲ್ಲಿ ಮಾತನಾಡಿದ ಅವರು, ಮೊದಲು ಜನರ ಬದುಕನ್ನು ಕಟ್ಟಲು ನೋಡಿ. ಕೊಡಗಿನಲ್ಲಿ ಮೂರು ವರ್ಷದಿಂದ ಭೂಕುಸಿತದಿಂದ ಮನೆ, ಬೆಳೆ ಹಾಳಾಗಿದೆ. ಅವರಿಗೆ ಏನು ಕೊಟ್ಟಿದ್ದೀರಿ ಮೊದಲು ಹೇಳಿ. ಆಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ. ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಬಂದು ನಮಗೆ ಬೋಧನೆ ಮಾಡುವುದು ಏನಿದೆ. ಮೊದಲು ಜನರ ಬದುಕನ್ನು ಕಟ್ಟಲು ನೋಡಿ ಅವರ ಉಪದೇಶ ಕಟ್ಟಿಕೊಂಡು ನನಗೆ ಏನೂ ಆಗಬೇಕಿಲ್ಲ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.


ಸಚಿವ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ, ಅದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Join Whatsapp
Exit mobile version