ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಗಾಲಿ ಜನಾರ್ದನ ರೆಡ್ಡಿ

Prasthutha|

ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

- Advertisement -


ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಕೆಆರ್ ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ ಎಂದರು.

Join Whatsapp