‘ನನ್ನ ಮೌನವೂ ವೀಕ್ನೆಸ್ ಅಲ್ಲ’: ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

Prasthutha|

ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಒಂದು ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. 135 ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲಾ ಶಾಸಕರು ಮೈಸೂರು ಹೋಗಲು ಪ್ಲಾನ್ ಮಾಡಲಾಗಿತ್ತು. ಆದರೆ, ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೋಗಲು ಆಗಲಿಲ್ಲ. ಇದರಲ್ಲಿ ಏನೂ ವಿಶೇಷತೆ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.