ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲಾಯಿತು: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

- Advertisement -


ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮಿ ಈ ವಿಷಯ ತಿಳಿಸಿದರು.
ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿದ್ದ ಅವರ ಪುತ್ರ ಮೃಣಾಲ್ ಬಿಜೆಪಿಯ ಜಗದೀಶ್ ಶೆಟ್ಟರ್ ವಿರುದ್ಧ 1.78 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
‘ಬೆಳಗಾವಿಯಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿತ್ತು. ಆದರೆ, ಈ ಬಾರಿ ಬಿಜೆಪಿ ಮತ್ತು ಎಂಇಎಸ್ ಒಟ್ಟಿಗೆ ಬಂದಂತೆ ಕಾಣುತ್ತಿದೆ’ ಎಂದು ಲಕ್ಷ್ಮಿ ಹೇಳಿದರು.

Join Whatsapp