ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶಿವಾನಂದ್ ಪಾಟೀಲ್ ಸ್ಪಷ್ಟನೆ

Prasthutha|

ವಿಜಯಪುರ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ತಮ್ಮ ಹೇಳಿಕೆ ಕುರಿತು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

- Advertisement -

ಈ ಸಂಬಂಧ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಹೇಳುವ ಮೂಲಕ ಸಚಿವರು ಪರೋಕ್ಷವಾಗಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ನಾನು ರೈತರ ವಿರೋಧಿ ಅಲ್ಲ, ರೈತರ ವಿರೋಧವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಮೂರು ವರ್ಷಕ್ಕೊಮೆ ರೈತರ ಬೆಳೆಗಳಿಗೆ ಬೆಲೆ ಬರುತ್ತದೆ. ಉಳಿದ ಎರಡು ಬೆಲೆ ಇಲ್ಲದೆ ಕಂಗಾಲಾಗಿರುತ್ತಾರೆ. ಹಾಗಾಗಿ ರೈತರು ಸಾಲಮನ್ನಾ ಆಗಲಿ ಎಂದು ಆಶಯ ವ್ಯಕ್ತಪಡಿಸುತ್ತಾರೆ ಎಂದಿದ್ದೇನೆ ಎಂದರು.

Join Whatsapp
Exit mobile version