ಮ್ಯಾನ್ಮಾರ್‌ | ಭದ್ರತಾ ಪಡೆ ಗುಂಡಿಗೆ 38 ಬಲಿ

Prasthutha|

- Advertisement -

ಯಾಂಗೋನ್‌: ಮ್ಯಾನ್ಮಾರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಸೇನಾಡಳಿತ ಭದ್ರತಾ ಪಡೆಗಳನ್ನು ಬಳಸಿ ರಬ್ಬರ್‌ ಬುಲೆಟ್‌, ಅಶ್ರುವಾಯು, ಗುಂಡಿನ ದಾಳಿ ನಡೆಸಿರುವುದರಿಂದಾಗಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಮ್ಯಾನ್ಮಾರ್‌ನಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎನ್ನುವುದು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ, ಬುಧವಾರ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ಕಳವಳ ವ್ಯಕ್ತಪಡಿಸಿದೆ’ ವಿಶ್ವಸಂಸ್ಥೆ ಅಧಿಕಾರಿಗಳು ಸ್ವಿಟ್ಜರ್ಲೆಂಡ್‌ನಲ್ಲಿ ತಿಳಿಸಿದ್ದಾರೆ.

- Advertisement -

ಕಳೆದ ತಿಂಗಳು ನಡೆದ ಮಿಲಿಟರಿ ಕ್ಷಿಪ್ರ ದಂಗೆ ವಿರೋಧಿಸಿ ದೇಶದಾದ್ಯಂತ ನಾಗರಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುತೇಕ ನಗರಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜನರನ್ನು ಚದುರಿಸಲು ಭದ್ರತಾ ಪಡೆಗಳು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದು, ಪತ್ರಕರ್ತರು ಸೇರಿದಂತೆ ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಮ್ಯಾನ್ಮಾರ್‌ನಲ್ಲಿ ಬಿಕ್ಕಟ್ಟು ಬಗೆಹರಿಸುವಂತೆ ಅಂತರರಾಷ್ಟ್ರೀಯ ಸಮುದಾಯದ ಮೇಲೆ ಒತ್ತಡವೂ ಹೆಚ್ಚಾಗಿರುವುದರಿಂದ ಭದ್ರತಾ ಮಂಡಳಿ ಸಭೆ ಮಹತ್ವ ಪಡೆದಿದೆ.

Join Whatsapp