ಮ್ಯಾನ್ಮಾರ್: ಆಂಗ್ ಸಾನ್ ಸೂಕಿ ಆಪ್ತ ಸಹಾಯಕರ ಬಂಧನ

Prasthutha: December 30, 2021

ಯಾಂಗೋನ್: ದೇಶದ್ರೋಹ ಆರೋಪದಲ್ಲಿ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಎಂಬಾಕೆಯ ಇಬ್ಬರು ಆಪ್ತ ಸಹಾಯಕರಿಗೆ ಮ್ಯಾನ್ಮಾರ್ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಕಾನೂನು ಮೂಲಗಳು ತಿಳಿಸಿವೆ.

ಬಂಧಿತರನ್ನು NLD ಕೇಂದ್ರೀಯ ಸಮಿತಿ ಸದಸ್ಯರುಗಳಾದ ಆರ್ಥಿಕ ಸಲಹೆಗಾರ ಹಾನ್ ಥಾರ್ ಮೈಂಟ್ ಮತ್ತು ಥೀನ್ ಓ ಎಂದು ಗುರುತಿಸಲಾಗಿದೆ ಎಂದು ಕಾನೂನು ಮೂಲಗಳು ತಿಳಿಸಿವೆ.

ಸದ್ಯ ನ್ಯಾಯಾಲಯದ ವಿಚಾರಣೆಯ ವೇಳೆ ಪತ್ರಕರ್ತರರು ಮತ್ತು ವಕೀಲರು ಮಾಧ್ಯಮದೊಂದಿಗೆ ಮಾತನಾಡುವುದನ್ನು ನಿಷೇಧಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ಹಿಂದೆ ಮಿಲಿಟರ್ ಆಡಳಿತದಲ್ಲಿ ವರ್ಷಗಳ ಕಾಲ ಬಂಧನದಲ್ಲಿದ್ದ ಸೂಕಿ, ಮಿಲಿಟರಿಯ ವಿರುದ್ಧ ವಿರುದ್ಧ ಪಚೋದನೆ ಮತ್ತು ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಕ್ಕಾಗಿ ನಾಲ್ಕು ವರ್ಷಗಳ ಕಾಲ ಬಂಧನದಲ್ಲಿರಬೇಕಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!