March 29, 2021

ಮಯನ್ಮಾರ್‌ ಮಿಲಿಟರಿಯಿಂದ ನಾಗರಿಕರ ಹತ್ಯೆ | ಜೋ ಬೈಡನ್ ಖಂಡನೆ

ವಾಷಿಂಗ್ಟನ್:  ಮಯನ್ಮಾರ್‌ನಲ್ಲಿ ಮಿಲಿಟರಿ ಆಡಳಿತವು ಚುನಾಯಿತ ಸರಕಾರವನ್ನು ಉರುಳಿಸಿ ಇತ್ತೀಚಿಗೆ ಅಮಾಯಕ ನಾಗರಿಕರನ್ನು ಹತ್ಯೆಗೈದಿರುವ ಘಟನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ತೀವ್ರವಾಗಿ ಖಂಡಿಸಿದ್ದಾರೆ.

ಮಯನ್ಮಾರ್‌ನಲ್ಲಿ ಮಿಲಿಟರಿ ಆಡಳಿತವನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ನಾಗರಿಕರ ಮೇಲೆ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿದೆ. ಪರಿಣಾಮ ಶನಿವಾರ ಒಂದೇ ದಿನದಲ್ಲಿ 114 ಮಂದಿ ಹತ್ಯೆಗೀಡಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಬೈಡನ್, ‘ಇದು ಭಯಾನಕ. ನಿಜಕ್ಕೂ ಅತಿರೇಕದ ಘಟನೆ. ನನಗೆ ಲಭಿಸಿದ ವರದಿಗಳ ಪ್ರಕಾರ ಅನಗತ್ಯವಾಗಿ ನಾಗರಿಕರನ್ನು ಕೊಲೆ ಮಾಡಲಾಗಿದೆ’ ಎಂದಿದ್ದಾರೆ.

ಸೇನಾದಂಗೆಯ ಬಳಿಕ ಮ್ಯಾನ್ಮಾರಿನಲ್ಲಿ ಇದುವರೆಗೆ ನಡೆದ ಹಿಂಸಾಚಾರದಲ್ಲಿ 440ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಯಾಂಗೂನ್‌ನಲ್ಲಿರುವ ಅಮೆರಿಕದ ಕೇಂದ್ರದ ಮೇಲೂ ಮಯನ್ಮಾರ್ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿತ್ತು ಎಂಬುದು ವರದಿಯಾಗಿದೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಸದನದ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿರುವ ಗ್ರೆಗರಿ ಮೀಕ್ಸ್ ಹೇಳಿದ್ದಾರೆ.

ಮಯನ್ಮಾರ್‌ನಲ್ಲಿ ಸಶಸ್ತ್ರ ಪಡೆ ದಿನದಂದೇ ನಾಗರಿಕರನ್ನು ಹತ್ಯೆ ಮಾಡಲಾಗಿದೆ. ಯಾಂಗೂನ್‌ನಲ್ಲಿ ಅಮೆರಿಕದ ಕೇಂದ್ರದ ಮೇಲಿನ ದಾಳಿಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಪರಿಸ್ಥಿತಿ ಕೈಮೀರಿದೆ ಎಂದು ಬೈಡನ್ ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!