ಆಂಗ್ ಸಾನ್ ಸೂಕಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಮ್ಯಾನ್ಮಾರ್ ನ್ಯಾಯಾಲಯ!

Prasthutha|

ಜಿನೇವಾ: ಮಿಲಿಟರಿ ವಿರುದ್ಧದ ಪ್ರಚೋದನಾಕಾರಿ ಹೇಳಿಕೆ ಮತ್ತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮ್ಯಾನ್ಮಾರ್ ನ್ಯಾಯಾಲಯ ಸೋಮವಾರ ಉಚ್ಛಾಟಿತ ನಾಯಕಿ ಆಂಗ್ ಸಾನ್ ಸೂಕಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

- Advertisement -

ಸದ್ಯ ಸೂಕಿ ಅವರಿಗೆ ಸೆಕ್ಷನ್ 505 (ಬಿ) ಅಡಿಯಲ್ಲಿ ಎರಡು ವರ್ಷ ಮತ್ತು ನೈಸರ್ಗಿಕ ವಿಕೋಪ ಕಾನೂನಿನ ಅಡಿಯಲ್ಲಿ ಎರಡು ವರ್ಷ ಸೇರಿದಂತೆ ಒಟ್ಟು ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಜುಂಟಾ ವಕ್ತಾರ ಜಾವ್ ಮಿನ್ ಟುನ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಸೂಕಿ ಅವರು ಶಾಂತಿಗಾಗಿ ನೋಬೆಲ್ ಪ್ರಶಸ್ತಿ ಪಡೆದುಕೊಂಡಿದ್ದರು.

Join Whatsapp