ಮೈಸೂರು: ಅರಣ್ಯ ಇಲಾಖೆ ಬೋನಿಗೆ ಬಿತ್ತು ಮತ್ತೊಂದು ಚಿರತೆ

Prasthutha|

ಮೈಸೂರು: ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಚಿರತೆ, ಹುಲಿ ದಾಳಿಗಳು ಹೆಚ್ಚುತ್ತಿದ್ದು, ಗ್ರಾಮಸ್ಥರನ್ನು ಆತಂಕಗೊಳಿಸುತ್ತಿವೆ. ಜೀವ ಭಯದಲ್ಲಿ ಕಾಲ ಕಳೆಯುತ್ತಿದ್ದಾರೆ. ಹಲವು ದಿನಗಳಿಂದ ಕೀರಾಳು ಗ್ರಾಮದ ಸುತ್ತ ಕಾಣಿಸಿಕೊಂಡಿದ್ದ ಚಿರತೆ, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಒತ್ತಾಯಿಸಿದ್ದರು.

- Advertisement -

ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಕೊನೆಗೂ ಚಿರತೆ ಬಿದ್ದಿದೆ. ಚಿರತೆ ಸೆರೆ ಹಿಡಿದಿರುವ ಹಿನ್ನೆಲೆಯಲ್ಲಿ ಕೀರಾಳು ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

ಜಿಲ್ಲೆಯಲ್ಲಿ ಈ ಹಿಂದೆ ಚಿರತೆಯೊಂದು ಅರಣ್ಯ ಇಲಾಖೆ ಬೋನಿಗೆ ಬಿದ್ದಿತ್ತು




Join Whatsapp