ನ್ಯಾಯಾಧೀಶರ ಹೇಳಿಕೆ ಖಂಡಿಸಿ ಮೈಸೂರು ಬಂದ್ ಗೆ ಕರೆ: ಬೃಹತ್ ಪ್ರತಿಭಟನೆ

Prasthutha|

ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಗಣರಾಜ್ಯೋತ್ಸವ ಕಾರ್ಯಕ್ರಮದಿಂದ ತೆಗೆಸಿದ ಕೃತ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳು ಮೈಸೂರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿವೆ.

- Advertisement -

“ಸಂವಿಧಾನ ಸಂರಕ್ಷಣಾ ಸಮಿತಿ” ಕರೆಕೊಟ್ಟಿರುವ ಪ್ರತಿಭಟನೆಯಲ್ಲಿ 40ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ಪಾಲ್ಗೊಂಡಿದ್ದವು. ಜೊತೆಗೆ ಅನೇಕ ಸಂಘ-ಸಂಸ್ಥೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿದ್ದವು.

ಮೈಸೂರು ನಗರದ ಹಳೇಸಂತೇಪೇಟೆ, ಡಿ.ದೇವರಾಜ ಅರಸು ರಸ್ತೆ, ಎಂಪಿಎಂಸಿ, ಸಯ್ಯಾಜಿರಾವ್ ರಸ್ತೆ, ಎಂ.ಜಿ.ರೋಡ್ ಮಾರ್ಕೆಟ್ ಸೋಮವಾರ ಭಾಗಶಃ ಸ್ತಬ್ಧವಾಗಿದ್ದವು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬಂದ್ ಗೆ ಚಾಲನೆ ನೀಡಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಜ್ಞಾನ ಪ್ರಕಾಶ್ ಸ್ವಾಮೀಜಿ, “ನ್ಯಾಯಾಧೀಶರ ನಡೆ ಖಂಡನಾರ್ಹ. ಅವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಹೈಕೋರ್ಟ್ ನಡೆ ಕೂಡ ಖಂಡನೀಯ. ರಾಜ್ಯ ಸರ್ಕಾರ ಕೂಡ ಅವರನ್ನು ರಕ್ಷಿಸುತ್ತ ಬಾಬಾಸಾಹೇಬ್ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸುತ್ತಿದೆ” ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.



Join Whatsapp