Home ಟಾಪ್ ಸುದ್ದಿಗಳು ಫಾರೂಕಿಯಾ ಕಾಲೇಜಿನ ಸಮಸ್ಯೆ ಬಗೆಹರಿಸದಿದ್ದರೆ ಮೈಸೂರು ಬಂದ್: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಫಾರೂಕಿಯಾ ಕಾಲೇಜಿನ ಸಮಸ್ಯೆ ಬಗೆಹರಿಸದಿದ್ದರೆ ಮೈಸೂರು ಬಂದ್: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಮೈಸೂರು: ಲೀಸ್ ಅವಧಿ ಮುಗಿದಿದೆ ಎಂಬ ನೆಪವೊಡ್ಡಿ ಮೈಸೂರಿನ ಫಾರೂಖಿಯಾ ಗರ್ಲ್ಸ್ ಹೈಸ್ಕೂಲ್’ಗೆ ಬೀಗ ಜಡಿದ ಅಧಿಕಾರಿಗಳ ನಡೆಯನ್ನು ಪ್ರಶ್ನಿಸಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಎರಡು ದಿನಗಳೊಳಗಾಗಿ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮೈಸೂರು ಬಂದ್ ಮಾಡಿ ಪ್ರತಿಭಟಿಸಲಾಗುವುದೆಂದು ಎಚ್ಚರಿಸಿದ್ದಾರೆ.

ಶೈಕ್ಷಣಿಕ ವರ್ಷದ ಮಧ್ಯದಲ್ಲೇ ಮೈಸೂರಿನ ಫಾರೂಕಿಯಾ ಕಾಲೇಜಿಗೆ ಬೀಗ ಜಡಿದಿರುವುದರಿಂದ ಸುಮಾರು 450 ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅನ್ಯಾಯವಾಗಿದೆ. ಇದನ್ನು ಖಂಡಿಸಿ SDPI ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ದುಲ್ ಮಜೀದ್, ಯಾವುದೇ ಮುನ್ಸೂಚನೆ ನೀಡದೆ ಕಳ್ಳರ ಹಾಗೇ ಶಾಲೆಗೆ ಬೀಗ ಹಾಕಿರುವ ಜಿಲ್ಲಾಡಳಿತದ ನಡೆ ಖಂಡನೀಯ. ಕೋವಿಡ್’ನಿಂದಾಗಿ ವಿದ್ಯಾರ್ಥಿಗಳು ಈಗಾಗಲೇ 2 ವರ್ಷ ಶಿಕ್ಷಣವನ್ನು ಕಳೆದುಕೊಂಡಿದ್ದಾರೆ. ಈ ಮಧ್ಯೆ ನ್ಯಾಯಾಲಯ ಆದೇಶವೆಂದು ಬಿಂಬಿಸಿ ಶಾಲೆಗೆ ಬೀಗ ಜಡಿದಿರುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಜಿಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆ ಈ ಸಮಸ್ಯೆಯನ್ನು ಪೋಷಕರು, ಜನಪ್ರತಿನಿಧಿಗಳು ಮತ್ತು ಆಡಳಿತ ಸಮಿತಿಯೊಂದಿಗೆ ಚರ್ಚಿಸಿ ಬಗೆಹರಿಸಬೇಕು ಎಂದು ಅವರು ಮನವಿ ಮಾಡಿದರು.

ವಿದ್ಯಾರ್ಥಿಗಳ ಶಿಕ್ಷಣದೊಂದಿಗೆ ಜಿಲ್ಲಾಡಳಿತ ಚೆಲ್ಲಾಟವಾಡದೆ ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸಲಿ. ಒಂದು ವೇಳೆ ಎರಡು ದಿನಗಳ ಒಳಗೆ ಈ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ SDPI ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಬೀಗ ಒಡೆಯಲಿದ್ದಾರೆ ಮತ್ತು ಮೈಸೂರು ಬಂದ್ ಮಾಡಲಾಗುವುದು ಎಂದು SDPI ರಾಜ್ಯಾಧ್ಯಕ್ಷರು ಎಚ್ಚರಿಸಿದ್ದಾರೆ.

Join Whatsapp
Exit mobile version