ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್’ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.
ದಶಪಥ ಹೆದ್ದಾರಿಯಿಂದಾಗಿ ಮೈಸೂರು ಬೆಂಗಳೂರು ನಡುವಿನ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಎಕ್ಸ್’ಪ್ರೆಸ್ ವೇಗೆ ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್ಪ್ರೆಸ್ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದರು.