ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಮೃತ್ಯು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

Prasthutha|

ಮೈಸೂರು: ಕಾರು ಪಲ್ಟಿಯಾಗಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಊಟಿ ಬಳಿ ನಡೆದಿದೆ.

- Advertisement -

ಮೈಸೂರಿನ ಎನ್.ಆರ್ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸ್ವಾಮಿಗೌಡ ಅಪಘಾತದಲ್ಲಿ ಮೃತಪಟ್ಟವರು.

ಅವರು ಸ್ನೇಹಿತರ ಕುಟುಂಬದವರ ಜೊತೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದುರಂತ ನಡೆದಿದ್ದು, ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

Join Whatsapp