ಇಂದು ಡೆಂಗ್ಯೂಗೆ ಮೈಸೂರಿನಲ್ಲಿ ಎರಡನೇ, ಹಾಸನದಲ್ಲಿ ಏಳನೇ ಬಲಿ
ಮೈಸೂರು: ಮೈಸೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಡೆಂಗ್ಯೂಗೆ ಪ್ರಾಣ ಕಳಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.
ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಮೃತ
ಹಾಸನ: ಶಂಕಿತ ಡೆಂಗ್ಯೂಗೆ ಇಂದು 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಮೃತಪಟ್ಟಿದ್ದಾರೆ.
ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.