ಮೈಸೂರು: KSRP ವಸತಿ ಗೃಹದಲ್ಲಿ ಮಹಿಳಾ ಕಾನ್’ಸ್ಟೇಬಲ್ ಆತ್ಮಹತ್ಯೆ

Prasthutha|

ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ (KSRP) ವಸತಿಗೃಹದ ಮನೆಯಲ್ಲಿ ನಡೆದಿದೆ.

- Advertisement -

32 ವರ್ಷದ ಗೀತಾ ಆತ್ಮಹತ್ಯೆ ಮಾಡಿಕೊಂಡ ಕಾನ್’ಸ್ಟೇಬಲ್.
ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್’ಸ್ಟೇಬಲ್ ಆಗಿದ್ದರು.

ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದ ಗೀತಾ, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ತನ್ನ ಪತಿಯನ್ನು ಹೊರಗಡೆ ಕಳುಹಿಸಿದ್ದಾರೆ.
ಪತಿ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದರು. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp