ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬೇಜವಾಬ್ದಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ

Prasthutha|

ದಾವಣಗೆರೆ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ಸಾಲು ಸಾಲು ಬೇಜವಾಬ್ದಾರಿ ಹೇಳಿಕೆಗಳು ಮುಂದುವರೆದಿವೆ.

ಇದೀಗ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್, ನನಗೆ ಇದರ ಬಗ್ಗೆ ಗೊತ್ತೇ ಇಲ್ಲ  ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

- Advertisement -

ಅಲ್ಲದೆ, ಮೈಸೂರಿನಲ್ಲಿ ರೇಪ್ ನಡೆದ್ರೇ ನನ್ನನ್ನು ಯಾಕೆ ಕೇಳ್ತಿರಾ, ಇನ್ನು ನಾನು ಏನೂ ನೋಡಿಲ್ಲಪ್ಪಾ, ನಮ್ಮ ಜಿಲ್ಲೆಯಲ್ಲಿ ಏನಾದರೂ ಆಗಿದ್ರೇ ಕೇಳು. ಅದಕ್ಕೆ ಖಂಡಿತವಾಗಿ ಉತ್ತರಿಸಿ ಅಧಿಕಾರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು. ಇವರ ಬೇಜವಾಬ್ದಾರಿ ಹೇಳಿಕೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

- Advertisement -