ಮೈಸೂರು ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ; ಉಪಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್ ಆಯ್ಕೆ

Prasthutha|

ಮೈಸೂರು : ಭಾರೀ ಕುತೂಹಲ ಮೂಡಿಸಿದ್ದ ಮೈಸೂರು ಮೇಯರ್, ಉಪ ಮೇಯರ್ ಚುನಾವಣೆಗೆ ಕೊನೆಗೂ ಅಂತಿಮ ತೆರೆ ಬಿದ್ದಿದೆ. ಮೇಯರ್ ಆಗಿ ಜೆಡಿಎಸ್ ನ ರುಕ್ಷಿಣಿ ಮಾದೇಗೌಡ ಮತ್ತು ಉಪಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.

- Advertisement -

ಜೆಡಿಎಸ್ ನ ರುಕ್ಮಿಣಿ ಮಾದೇಗೌಡ 43 ಮತಗಳನ್ನು ಪಡೆದು, 23ನೇ ಮೇಯರ್ ಆಗಿ ಆಯ್ಕೆಯಾದರು. ಬಿಜೆಪಿಯ ಸುನಂದಾ ಪಾಲನೇತ್ರಗೆ 26 ಮತಗಳು ಬಿದ್ದವು.

ಅಧಿಕಾರದಿಂದ ಬಿಜೆಪಿಯನ್ನು ದೂರ ಇಡಲು ಕಾಂಗ್ರೆಸ್ ಸದಸ್ಯರು ಜೆಡಿಎಸ್ ಗೆ ಬೆಂಬಲಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ – ಕಾಂಗ್ರೆಸ್ ಮೈತ್ರಿ ವಿಚಾರದಲ್ಲಿ ಹಲವು ಗೊಂದಲಗಳಿದ್ದವು. ಕೊನೆಗಳಿಗೆ ವರೆಗೂ ಯಾರು, ಯಾರನ್ನು ಬೆಂಬಲಿಸಲಿದ್ದಾರೆ ಎನ್ನುವುದು ಸ್ಪಷ್ಟವಾಗಿರಲಿಲ್ಲ

Join Whatsapp