ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ತಮಿಳುನಾಡಿನಲ್ಲಿ ಆರೋಪಿಗಳು ವಶಕ್ಕೆ?

Prasthutha|

ಮೈಸೂರು:  ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ತಮಿಳು ನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

- Advertisement -

ಘಟನಾ ಸ್ಥಳದಲ್ಲಿ ದೊರೆತ ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಸುಮಾರು 10 ಮಂದಿಯ ಮೇಲೆ ಶಂಕೆ ಉಂಟಾಗಿದೆ. ಇವರಲ್ಲಿ ಕೆಲವರು ಕೇರಳ ಮತ್ತು ತಮಿಳುನಾಡಿಗೆ ಹೋಗಿದ್ದಾರೆ. ಹಾಗಾಗಿ ಪೊಲೀಸರ ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ಶುಕ್ರವಾರ ತೆರಳಿದ್ದವು. ಶುಕ್ರವಾರ ತಡರಾತ್ರಿಯ ಹೊತ್ತಿಗೆ ನಾಲ್ವರನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ‌.

ಇವರು ಘಟನೆ ನಡೆದ ಸಂದರ್ಭದಲ್ಲಿ ಸ್ಥಳಕ್ಕೆ ಹೋಗಿದ್ದು ಏಕೆ, ನಂತರ ರಾಜ್ಯ ಬಿಟ್ಟು ಹೋಗಿದ್ದು ಏಕೆ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಆರೋಪಿಗಳು ಎಂದು ಖಚಿತಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp