Home ಟಾಪ್ ಸುದ್ದಿಗಳು ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತರು ಅರೆಸ್ಟ್

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತರು ಅರೆಸ್ಟ್

ಮೈಸೂರು:  ಸಾಂಸ್ಕೃತಿಕ ನಗರಿಯನ್ನು  ಬೆಚ್ಚಿ ಬೀಳಿಸಿದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಮುಂಬೈ ಮೂಲದ ವಿದ್ಯಾರ್ಥಿನಿ ನಗರದ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಮಂಗಳವಾರ ಸಂಜೆ 7.30ರ ಸುಮಾರಿನಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶಕ್ಕೆ ತೆರಳಿ, ಸ್ನೇಹಿತನೊಂದಿಗೆ ಕುಳಿತಿರುವಾಗ, ಪಾನಮತ್ತ ಗುಂಪೊಂದು ಏಕಾಏಕಿ ಯುವತಿಯನ್ನು ಹಿಡಿದುಕೊಂಡಿದೆ. ಈ ವೇಳೆ ಆಕೆಯ ಸ್ನೇಹಿತ ಪ್ರತಿರೋಧ ತೋರಿದ ವೇಳೆ ಮೂವರು ಸೇರಿಕೊಂಡು ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಮೊಬೈಲ್ ಟವರ್ ಜಾಡು ಹಿಡಿದು ಶೋಧಕಾರ್ಯ ಮುಂದುವರೆಸಿದ್ದಾರೆ.

Join Whatsapp
Exit mobile version