ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

Prasthutha|

- Advertisement -

ಲಂಡನ್: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಅವರಿಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ.

ಈ ಖಡ್ಗ ಟಿಪ್ಪು ಸುಲ್ತಾನ್‌ ರ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.

- Advertisement -

ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ
ಖಡ್ಗ ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಬಳಿ ಇತ್ತು.

ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ ‘ಬುಬ್ರಿ (ಟೈಗರ್ ಸ್ಟ್ರೈಪ್)’ ಅಲಂಕಾರವನ್ನು ಖಡ್ಗ ಹೊಂದಿದೆ.



Join Whatsapp