ಮೈಸೂರಿನ ಗನ್ ಹೌಸ್ ಸರ್ಕಲ್ ಪ್ರತಿಮೆ ವಿವಾದ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Prasthutha|

ಬೆಂಗಳೂರು: ಮೈಸೂರು ನಗರದ ಗನ್ ಹೌಸ್ ಸರ್ಕಲ್‌ನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ರಾಜೇಂದ್ರ ಸ್ವಾಮೀಜಿ ಅವರ ಪ್ರತಿಮೆ ಸ್ಥಾಪನೆ ಸಂಬಂಧವಾದ ವಿವಾದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಅನಧಿಕೃತವಾಗಿ ಪ್ರತಿಮೆ ಸ್ಥಾಪಿಸಿದ್ದು, ಅದನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿ‌ ಮಾಡಿದೆ.

- Advertisement -

ಸರ್ಕಲ್‌ನಲ್ಲಿ ಸ್ವಾಮೀಜಿ ಪ್ರತಿಮೆ ಅಥವಾ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಮೆ ಯಾವುದು ಸ್ಥಾಪನೆ ಮಾಡಬೇಕೆಂಬ ವಿವಾದ ಹೊಸ ರೂಪ ಪಡೆದುಕೊಂಡಿದೆ. ಈ ಕುರಿತಂತೆ ಮೈಸೂರಿನ ಗಿರಿಯಾಭೋವಿ ಪಾಳ್ಯ ನಿವಾಸಿ ಸುಬ್ರಹ್ಮಣ್ಯ ಮತ್ತು ಕುರುಬರಹಳ್ಳಿ ನಿವಾಸಿ ಎನ್. ಶೀಲಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಮೈಸೂರು ಏರ್‌ಪೋರ್ಟ್ ರನ್‌ವೇ ವಿಸ್ತರಣೆಗೆ ಭೂಸ್ವಾಧೀನ ತೊಡಕು ನ್ಯಾಯಪೀಠವು ಕೆಲ ಕಾಲ ವಿಚಾರಣೆ ನಡೆಸಿದ ಬಳಿಕ ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮೈಸೂರು ಜಿಲ್ಲಾಧಿಕಾರಿ, ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ, ನಗರ ಪೊಲೀಸ್‌ ಆಯುಕ್ತರು ಮತ್ತು ಮೈಸೂರು ವಿಭಾಗದ ಲೋಕೋಪಯೋಗಿ ಇಲಾಖೆ ಕಾರ್ಯಕಾರಿ ಇಂಜಿನಿಯರ್‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. Chamundi Hill: ಮೈಸೂರು ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣದ ಅಗತ್ಯವಿಲ್ಲ: ಸಂಸದ ಪ್ರತಾಪ್‌ ಸಿಂಹ ಹೀಗೆ ಹೇಳಿದ್ದೇಕೆ? ಅಲ್ಲದೆ, ಅರ್ಜಿ ಕುರಿತು ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಗಳಿಂದ ಅಗತ್ಯ ಮಾಹಿತಿ ಪಡೆದು ಎರಡು ವಾರದಲ್ಲಿ ಸೂಕ್ತ ಆಕ್ಷೇಪಣೆ ಸಲ್ಲಿಸಬೇಕು ಎಂದು ರಾಜ್ಯ ಅಡ್ವೊಕೇಟ್ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಪ್ರತಿಮೆ ಅನಾವರಣ ಕಾರ್ಯಕ್ರಮವು ಜನವರಿ 4ರಂದು ನಡೆಯಲಿದ್ದು, ಅದಕ್ಕೆ ತಡೆಯಾಜ್ಞೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ನ್ಯಾಯಪೀಠ ಇದೇ ವೇಳೆ ತಿರಸ್ಕರಿಸಿದೆ. ಅನಾವರಣ ಕಾರ್ಯಕ್ರಮ ನಿಗದಿಯಾಗಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸದ ಹಿನ್ನೆಲೆಯಲ್ಲಿ ಅವರ ಮಧ್ಯಂತರ ಮನವಿ ಪರಿಗಣಿಸಲಾಗದು ಎಂದು ನ್ಯಾಯಪೀಠ ತಿಳಿಸಿದೆ. Parashurama Idol: 33 ಅಡಿ ಎತ್ತರದ ಪರಶುರಾಮ ಪ್ರತಿಮೆ ನಾಪತ್ತೆ! ಸರ್ಕಾರದ ಸಮರ್ಥನೆ: ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಜರಾಗಿ, ಸರ್ಕಾರದ ಸ್ಥಳಗಳಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಪ್ರತಿಮೆಗಳನ್ನು ತೆರವುಗೊಳಿಸಬೇಕು ಎಂಬುದಾಗಿ ಸುಪ್ರೀಂಕೋರ್ಟ್‌ ಆದೇಶವಿದೆ. ಆದರೆ, ಸರ್ಕಲ್‌ಗಳಲ್ಲಿ ಪ್ರತಿಮೆ ಸ್ಥಾಪಿಸಬಾರದು ಎಂಬುದೇನಿಲ್ಲ. ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಸರ್ಕಲ್‌ಗಳಲ್ಲಿ ಪ್ರತಿಮೆ ಸ್ಥಾಪಿಸಬಹುದಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಕ್ರಮವಾಗಿಯೇ ಸರ್ಕಲ್‌ನಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಹೈಕೋರ್ಟ್ ಅನುಮತಿ ನೀಡಿದ ನಂತರವೇ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹಾಗಾಗಿ, ಅರ್ಜಿಯನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಸಂಚಾರ ದಟ್ಟಣೆಯಿರುವ ಪ್ರದೇಶಗಳಲ್ಲಿ ಪುತ್ಥಳಿ ಹಾಗೂ ಪ್ರತಿಮೆಗಳನ್ನು ಸ್ಥಾಪನೆ ಮಾಡಬಾರದು ಎಂಬುದಾಗಿ ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ತೀರ್ಪು ನೀಡಿದೆ. ಅದನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಸರ್ಕಾರಿ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆಗಳನ್ನು ಸ್ಥಾಪಿಸಿದ್ದರೆ, ಅವುಗಳನ್ನು ತೆರವುಗೊಳಿಸಬೇಕು. ಹಾಗೆಯೇ, ರಸ್ತೆ ಮಾರ್ಗಗಲ್ಲಿ ಅನಧಿಕೃತವಾಗಿ ಪ್ರತಿಮೆ ನಿರ್ಮಾಣ ಮಾಡುತ್ತಿರುವುದನ್ನು ಮೊದಲೇ ಗಮನ ಹರಿಸಿ ತಡೆಯಬೇಕು. ಒಮ್ಮೆ ಪ್ರತಿಮೆ ನಿರ್ಮಾಣವಾದಲ್ಲಿ, ಅದನ್ನು ತೆರವುಗೊಳಿಸುವುದ ಕಷ್ಟ ಎಂದು ಮೌಖಿಕವಾಗಿ ಹೇಳಿತು. ಜೊತೆಗೆ, ಪ್ರತಿಮೆಗಳ ಸ್ಥಾಪನೆಗೆ ನ್ಯಾಯಾಲಯದ ವಿರೋಧವಿಲ್ಲ. ಆದರೆ, ಸಾರ್ವಜನಿಕರಿಗೆ ತೊಂದರೆಯಾಗುವಂತೆ, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪ್ರತಿಮೆ ಸ್ಥಾಪಿಸುವುದು ಸರಿಯಲ್ಲ. ರಸ್ತೆಗಳು, ಸರ್ಕಾರಿ ಸ್ಥಳಗಳು ಕೇವಲ ಪ್ರತಿಮೆಗಳಿಂದ ತುಂಬಬಾರದು. ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಪ್ರತಿಮೆ ಸ್ಥಾಪನೆ ಮಾಡುವುದನ್ನು ನ್ಯಾಯಾಲಯ ಅನುಮತಿಸುವುದೇ ಇಲ್ಲ. ಸರ್ಕಲ್‌ಗಳಲ್ಲಿ ಪ್ರತಿಮೆ ಸ್ಥಾಪಿಸುವ ವಿಚಾರವನ್ನು ಪರೀಕ್ಷೆಗೊಳಪಡಿಸುವ ಅಗತ್ಯವಿದೆ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು. ರಾತ್ರೋರಾತ್ರಿ ಪ್ರತಿಮೆ: ಮೈಸೂರಿನ ಗನ್‌ ಹೌಸ್‌ ಸರ್ಕಲ್‌ನಲ್ಲಿ ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿಯನ್ನು ಇತ್ತೀಚೆಗೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿರುವುದು ವಿವಾದಕ್ಕೆ ಕಾರಣವಾಗಿತ್ತು, ಸ್ಥಳದಲ್ಲಿ ಪ್ರತಿಭಟನೆ ನಡೆದಿವೆ. ರಾಜೇಂದ್ರ ಸ್ವಾಮೀಜಿಗಳ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಪುತ್ಥಳಿ ಹಾಗೂ ಪ್ರತಿಮೆಗಳನ್ನು ಸ್ಥಾಪಿಸಬಾರದು ಎಂದು ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ನಿಂದ ಹಲವು ಆದೇಶಗಳು ಪ್ರಕಟವಾಗಿವೆ. ಆದ್ದರಿಂದ ಸ್ವಾಮೀಜಿಯ ಪುತ್ಥಳಿಯನ್ನು ತೆರವುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Join Whatsapp