ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿ: ವೈರಲ್ ವೀಡಿಯೊ ಬಗ್ಗೆ ಪೊಲೀಸರ ಸ್ಪಷ್ಟನೆ

Prasthutha|

ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಅಡ್ಡಾಡುತ್ತಿವೆಯೆಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸುದ್ದಿಯಾಗಿತ್ತು.ದೆಹಲಿ ಪೊಲೀಸರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಇದು ಕೇವಲ ಬೆಕ್ಕು ಮತ್ತು ಯಾವುದೇ ಚಿರತೆ ಅಲ್ಲ ಎಂದು ಹೇಳಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

- Advertisement -

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರದ ವೇಳೆ ಸೆರೆಯಾದ ಪ್ರಾಣಿಯ ಚಿತ್ರವನ್ನು ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಚಿರತೆ ಎಂದು ತೋರಿಸುತ್ತಿವೆ. ಕೆಲವು ಮಾಧ್ಯಮಗಳು ನಿಗೂಢ ಪ್ರಾಣಿ ಎಂದೆಲ್ಲ ಸುದ್ದಿ ಮಾಡಿವೆ. ಆದರೆ ಇದು ನಿಜವಲ್ಲ. ಕ್ಯಾಮೆರಾದಲ್ಲಿ ಸೆರೆಯಾದ ಪ್ರಾಣಿ ಸಾಕು ಬೆಕ್ಕು. ದಯವಿಟ್ಟು ಇಂತಹ ಕ್ಷುಲ್ಲಕ ವದಂತಿಗಳಿಗೆ ಕಿವಿಗೋಡಬೇಡಿ ಎಂದು ದೆಹಲಿ ಪೊಲೀಸರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.

Join Whatsapp