ಬೆಂಗಳೂರು | ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

Prasthutha|

ಬೆಂಗಳೂರು: ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

- Advertisement -


ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

Join Whatsapp