Home ಟಾಪ್ ಸುದ್ದಿಗಳು ಮೈಶುಗರ್ ಕಾರ್ಖಾನೆ ಸರ್ಕಾರಿ ಒಡೆತನದಲ್ಲೇ ಇರಲಿದೆ: ಸಿಎಂ ಬೊಮ್ಮಾಯಿ

ಮೈಶುಗರ್ ಕಾರ್ಖಾನೆ ಸರ್ಕಾರಿ ಒಡೆತನದಲ್ಲೇ ಇರಲಿದೆ: ಸಿಎಂ ಬೊಮ್ಮಾಯಿ

ಮೈಸೂರು ; ಮಂಡ್ಯ ಜಿಲ್ಲೆಯ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಒಡೆತನದಲ್ಲೇ ಮುಂದುವರೆಸಿಕೊಂಡು ಹೋಗಲು ಸರ್ಕಾರ ಇಚ್ಛಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಮಂಡ್ಯದಲ್ಲಿಂದು ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


ಮೈಶುಗರ್ ಸಕ್ಕರೆ ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ, ಪರಂಪರೆ ಇದೆ. ಸರ್ಕಾರಿ ಒಡೆತನದಲ್ಲೇ ಸಕ್ಕರೆ ಕಾರ್ಖಾನೆ ಮುಂದುವರೆಯಬೇಕು ಎಂಬುದು ಜನರ ಅಪೇಕ್ಷೆಯಾಗಿದೆ.
ಕಾರ್ಖಾನೆಯನ್ನು ಉಳಿಸಿ ಪುನಶ್ಚೇತನಗೊಳಿಸಲು ಇದೇ 18ರಂದು ಸಭೆ ನಡೆಸಿ ಒಂದು ಒಳ್ಳೆಯ ತೀರ್ಮಾನ ಕೈಗೊಳ್ಳಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

Join Whatsapp
Exit mobile version