ಮೈಸೂರು: ಜನರ ನಿದ್ದೆ ಕೆಡಿಸಿದ್ದ ಹುಲಿ ಕೊನೆಗೂ ಸೆರೆ

Prasthutha|

ಮೈಸೂರು: ಬಂಡೀಪುರ ಭಾಗದಲ್ಲಿ ಜನರ ನಿದ್ದೆ ಕೆಡಿಸಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ ಹುಲಿಯನ್ನು ಹಿಡಿಯಲಾಗಿದೆ.
ಸೋಮವಾರ ಮಧ್ಯರಾತ್ರಿ 1.45ರ ಹೊತ್ತಿಗೆ ಎರಡು ದಿನದ ಹಿಂದೆ ಹಸುವೊಂದನ್ನು ಕೊಂದಿದ್ದ ಜಾಗಕ್ಕೆ ಬಂದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು ಸದ್ಯ ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ.



Join Whatsapp
Exit mobile version