ಮೈಸೂರು: ಇನ್ಮುಂದೆ ಮೈಸೂರು ವಿಮಾನ ನಿಲ್ದಾಣವು ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ. ಕ್ಯಾಬಿನೆಟ್ ನಿರ್ಧಾರದ ಮೂಲಕ ಸಿಎಂ ಬೊಮ್ಮಾಯಿ ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎಂದು ರಾಜಕಾರಣಿಗಳು ಸರಕಾರವನ್ನು ಒತ್ತಾಯಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಾಪ ಸಿಂಹ ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು. ಅದರಂತೆ ಮನವಿಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆ ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಜಮೀನು ಹಸ್ತಾಂತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರ ಜತೆಗೆ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಟ್ವೀಟ್ ನಲ್ಲಿ ಅವರು ಸ್ಪಷ್ಟಪಡಿಸಿದರು.