ಮೈಸೂರು: ಮೈಸೂರು-ಬೆಂಗಳೂರು ಎಕ್ಸ್’ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇಂದು ಏಪ್ರಿಲ್ 1ರಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ದರವನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿತ್ತು. ಆದರೆ ಸಾರ್ವಜನಿಕರಿಂದ ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಪಸ್ ಪಡೆದಿದೆ.
ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಇನ್ನೂ ಕೆಲವು ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ಎಕ್ಸ್ ಪ್ರೆಸ್ ವೇಗೆ ಟೋಲ್ ದರ ಹೆಚ್ಚಳವಾಗುವುದು ಬೇಡ, ತಾತ್ಕಾಲಿಕವಾಗಿ ತಡೆಹಿಡಿಯಿರಿ ಎಂದು ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.