ಮೈಸೂರು: ಟೋಲ್ ಬಳಿ ಹೊತ್ತಿ ಉರಿದ BMW ಕಾರು

Prasthutha|

ಮೈಸೂರು: ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ಭಾನುವಾರ ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿದೆ. ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.

- Advertisement -


ಟೋಲ್ ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.