Home ಟಾಪ್ ಸುದ್ದಿಗಳು ಮೈಸೂರು: ಪತಿಯಿಂದಲೇ ಕಾಂಗ್ರೆಸ್ ನಾಯಕಿಯ ಕೊಲೆ

ಮೈಸೂರು: ಪತಿಯಿಂದಲೇ ಕಾಂಗ್ರೆಸ್ ನಾಯಕಿಯ ಕೊಲೆ

ಮೈಸೂರು: ಕಾಂಗ್ರೆಸ್ ನಾಯಕಿಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ.


ಹತ್ಯೆಯಾದ ಕಾಂಗ್ರೆಸ್ ನಾಯಕಿಯನ್ನು ವಿದ್ಯಾ ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ.


ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ಆರೋಪಿ ನಂದೀಶ್, ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ನಿನ್ನೆ ತಡರಾತ್ರಿ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ವಿದ್ಯಾ ತೆರಳಿದ್ದಾರೆ. ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

Join Whatsapp
Exit mobile version