ಮೈಸೂರು ದಸರಾ ಗಜಪಡೆಯ ತೂಕ ಪರೀಕ್ಷೆ: 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

Prasthutha|

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು.

- Advertisement -

ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.


ದಸರಾ ಗಜಪಡೆಯ ತೂಕದ ವಿವರ:
ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ

Join Whatsapp