Home ಟಾಪ್ ಸುದ್ದಿಗಳು ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.


ವಾದ್ಯಗೋಷ್ಠಿ ಮೂಲಕ ಅರಮನೆಯತ್ತ ಗಜಪಡೆ ಕಾಲ್ನಡಿಗೆಯಲ್ಲಿ ತೆರಳಿತು. ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಯು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಆಗಮಿಸಿದ ವೇಳೆಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಜನಪದ ಕಲಾ ತಂಡಗಳೊಂದಿಗೆ ನಗರದ ಅಶೋಕಪುರಂನ ಅರಣ್ಯ ಭವನದಿಂದ ಅರಮನೆಗೆ ಆಗಮಿಸಿದವು.

Join Whatsapp
Exit mobile version