ಮೈಸೂರು ದಸರಾ ಗೋಲ್ಡ್​ ಕಾರ್ಡ್​: ಟಿಕೆಟ್​ ದರ ಎಷ್ಟು? ಖರೀದಿ ಹೇಗೆ?

Prasthutha|

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಟಿಕೆಟ್​ ಮಾರಾಟ ಶನಿವಾರದಿಂದ (ಸೆ.28) ಆರಂಭವಾಗಲಿದೆ.

- Advertisement -

ಎರಡು ರೀತಿಯ ಟಿಕೆಟ್​ಗಳಿವೆ. ಗೋಲ್ಡ್​ ಕಾರ್ಡ್​ ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ.

ಸೆಪ್ಟೆಂಬರ್​ 30ರವರೆಗೆ ಮಾತ್ರ ಗೋಲ್ಡ್​ ಕಾರ್ಡ್​ ಮತ್ತು ಟಿಕೆಟ್ ​ಮಾರಾಟ ಮಾಡಲಾಗುತ್ತದೆ ಎಂದು ದಸರಾ ವಿಶೇಷ ಅಧಿಕಾರಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದರು.

- Advertisement -

ದಸರಾ ಮತ್ತು ಯುವ ದಸರಾಗೆ ಟಿಕೆಟ್​ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಪ್ರತಿನಿತ್ಯ 1 ಸಾವಿರದಿಂದ 1500 ಗೋಲ್ಡ್ ಕಾರ್ಡ್​ಗಳನ್ನು ಮರಾಟ ಮಾಡಲಾಗುತ್ತದೆ. ಒಂದು ದಸರಾ ಗೋಲ್ಡ್ ಕಾರ್ಡ್​ಗೆ 6,500 ರೂಪಾಯಿ ನಿಗದಿ ಮಾಡಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್​ನಲ್ಲಿ ಜಂಬೂಸವಾರಿ ಮೆರವಣಿಗೆ, ಪಂಜಿ‌ನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅರಮನೆ ಆವರಣದಲ್ಲಿ ಜಂಬೂಸವಾರಿ ವೀಕ್ಷಣೆಗೆ 3,500 ರೂ. ಬೆಲೆಯ ಟಿಕೆಟ್​ ಲಭ್ಯವಿದೆ. ಇನ್ನು, ಕೇವಲ ಪಂಜಿನ ಕವಾಯತು ವೀಕ್ಷಣೆಗೆ 1,000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.

ಟಿಕೆಟ್​ ಖರೀದಿ ಹೇಗೆ?

ಮೈಸೂರು ದಸರಾ ಅಧಿಕೃತ ವೆಬ್​ಸೈಟ್ https://www.mysoredasara.gov.in ಗೆ ಭೇಟಿ ನೀಡಿ.



Join Whatsapp